“ತಂದೆಯನೇ ಕೊಂದು ತಿಂಬ ಸುತನತಿ ರಮ್ಯಂ” ಎಂಬುದು ಕಂದ ಪದ್ಯದ ಕೊನೆಯ (ಅಥವಾ ಎರಡನೆ) ಸಾಲು.
ಪದ್ಯದ ಉಳಿದ ಸಾಲುಗಳನ್ನು ಪೂರಣಿಸಿ, ಈ ಸಾಲಿನ ಅನರ್ಥ ತೊಡೆಯಿರಿ.
“ತಂದೆಯನೇ ಕೊಂದು ತಿಂಬ ಸುತನತಿ ರಮ್ಯಂ” ಎಂಬುದು ಕಂದ ಪದ್ಯದ ಕೊನೆಯ (ಅಥವಾ ಎರಡನೆ) ಸಾಲು.
ಪದ್ಯದ ಉಳಿದ ಸಾಲುಗಳನ್ನು ಪೂರಣಿಸಿ, ಈ ಸಾಲಿನ ಅನರ್ಥ ತೊಡೆಯಿರಿ.
ಈ ಕಂದ ಪದ್ಯದ ಪಾದಕ್ಕೆ, ಉಳಿದ ಮೂರು ಪಾದಗಳನ್ನು (ಸಾಲುಗಳನ್ನು) ಪೂರಣಿಸಿ ಸಮಸ್ಯೆಯನ್ನು ಬಗೆಹರಿಸಿರಿ ::
” ಸೊಂಟದ ಮೇಲ್ ಸೀರೆಯೆತ್ತಿ ಸುಂದರಿ ನಡೆದಳ್ “
ಕಂದ ಛಂದಸ್ಸಿನ ಸಮಸ್ಯಾಪದ್ಯದ ನಾಲ್ಕನೆಯ ಸಾಲು ಹೀಗಿದೆ ::
ಡಂಗುರಮಂ ಬನದೆ ಸಾರುತಿರ್ಕುಂ ಭ್ರಮರಂ
ಮೊದಲ ಮೂರು ಸಾಲುಗಳನ್ನು ಪೂರೈಸಿರಿ.
ವಿ.ಸೂ :: ಈ ಸಮಸ್ಯೆಯು ಗಣೇಶರಿಂದ ಸಿಕ್ಕದ್ದು
ಕಂದ ಛಂದಸ್ಸಿನ ಪದ್ಯದ ಕೊನೆಯ ಸಾಲು ಹೀಗಿದೆ ::
ಫಲಮಂ ತಿನಲಪ್ಪುದೇಂ ರಸಾಲಫಲದವೊಲ್?
(ರಸಾಲ= ಮಾವು)
ಮೊದಲ ೩ ಸಾಲುಗಳನ್ನು ಪೂರೈಸಿರಿ
ಕಂದ ಪದ್ಯದ ಛಂದಸ್ಸಿನ ಸ್ವರೂಪ ಇಲ್ಲಿದೆ
ವಿ.ಸೂ :: ಇದು ಗಣೇಶರು ಕೊಟ್ಟ ಸಮಸ್ಯೆ
ಹುಲ್ಲುಕಲ್ಲುಗಳೇನು? ಅದುಕೂಡ ಹೂರಣದಿ!
ಗುಲ್ಲನೆಬ್ಬಿಸದೆಯೇ ಬಿಡುವರೇನು?
ಬಲ್ಲಿದರೆ, ಸೊಲ್ಲನಡಗಿಸುವಿರೇ? – “ಹೂರಣದಿ
ಹುಲ್ಲುಕಲ್ಲುಗಳಿಗೂ ಹಿರಿಮೆಯುಂಟು”
ಸ್ನೇಹಿತರೆ, ೩ನೆಯ ಸಾಲನ್ನೂ ಸ್ವಲ್ಪ ತಿಂದಿದ್ದೇನೆ. ೩ನೇ ಸಾಲು “ಹೂರಣದಿ” ಮುಗಿವಂತೆ, ೪ನೇ ಸಾಲು “ಹುಲ್ಲುಕಲ್ಲುಗಳಿಗೂ ಹಿರಿಮೆಯುಂಟು” ಎಂಬುದಾಗಿ ಬರುವಂತೆ ಪರಿಹರಿಸಿ.
ಅನುರೂಪದಾ ಪಂಚಮಾತ್ರೆಗಳ ಚೌಪದಿಯ -
ಲನುಭಾವದಿಂದೀ ಸಮಸ್ಯೆ ಬಿಡಿಸಿ |
ತನುವಿಶೇಷದೊಳಿರುವುದಶ್ಲೀಲತೆಯೆ ಭಾಸ
“ಸ್ತನ ದೊಡ್ಡತನದಲ್ಲಿ ಶೋಭಿಸಿಹುದು” ||
ಇದು ಸದ್ಯದಲ್ಲಿ ನಡೆದ ಅಷ್ಟಾವಧಾನದಲ್ಲಿ ಕೊಟ್ಟ ಸಮ್ಮಸ್ಯೆ.. ಅಶ್ಲೀಲದಂತೆ ತೋರುವ ಮೇಲಿನ ಸಾಲಿನ (ಕೊನೆಯ ಸಾಲು) ಹಿಂದಿನ ೩ ಸಾಲುಗಳನ್ನು ಪೂರೈಸಿರಿ.
ಇದು ಗಣೇಶ ರವರು ಕೊಟ್ಟ ಸಮಸ್ಯೆ
ಬರಿಯ ಭಾಮಿನಿಯಲ್ಲಿ ಸಾಗು-
ತ್ತಿರುವ ಕಾವ್ಯಕುತೂಹಲದಿ ಜನ
ತೊರೆವರೇನೋ ಕುತುಕವನ್ನೆನುತೆನಗೆ ಸಂದೇಹ
ಸ್ಫುರಿಸಿತೀಗಳೆ ನಿಮ್ಮ ಜಾಣ್ಮೆಯು
ತರದೆ ಭಾಮಿನಿಯನ್ನು ನೋಡರು
ತೆರೆಯನೂ ರಸಿಕರ್ಗಳಂತೆಯೆ ಗಡಿದು ’ಐಟಮ್ ಸಾಂಗ್”!!
ಈ ಕಾರಣದಿಂದ ನಾನೇ ಒಂದು ವಸ್ತುವನ್ನು ಕೊಡುತ್ತಿದ್ದೇನೆ.
ಪಂಚಮಾತ್ರಾಗಣದ ಚೌಪದಿಯಲ್ಲಿ ಮುಂಜಾನೆಯ ಬಣ್ಣನೆಯಾಗಬೇಕು. ಎಷ್ಟು ಪದ್ಯಗಳಾದರೂ ಸರಿ, ಹೊಸ ಹೊಸ ಕಲ್ಪನೆಗಳಿಂದ ಕೂಡಿರಬೇಕೆಂಬುದೇ ಮುಖ್ಯನಿಯಮ.
ಮೊದಲಿಗೆ ನನ್ನ ಪದ್ಯದಿಂದಲೇ ಆರಂಭ; charity begins at home ಎಂದು ಗಾದೆಯಲ್ಲವೆ!
ಹಾಡುಹಕ್ಕಿಗಳೋಳಿ ಗುರು-ಲಘುಗಳಂತಾಗೆ
ಮೂಡುವೆಣ್ಣಿನ ಕೆಂಪು ರಸವಾಗಿರೆ
ಮೋಡಿಮಾಡುವ ಮಲರಲಂಕೃತಿಗಳೆನಿಸಿರಲು
ನೋಡಿ ನಸುಕಿನ ಕವನ ನವನವೀನ
ನಾವುಮಿತ್ರರು ಪಯಣ ಬೆಳೆಸಿರೆ
ಭಾವ ಕಲಕುವ ಸಾಲು ಕಂಡೆವು
“ರಾವಣಾಗಮನವನುಕಾದಳುಸೀತೆಕಾತುರದಿ”
ತಾವು ಕಾವ್ಯದಿ ಚತುರ ಮತಿಗಳು
ಸಾವಕಾಶದಲಿದನು ಚಿಂತಿಸಿ
ಬೇವಸಾಲಿಗೆಬೆಲ್ಲಬೆರೆಸುತಹಿತವನುಣಿಸುವಿರಾ?
ಭಾಮಿನಿ ಕೊನೆ ಸಾಲು – “ರಾವಣಾಗಮನವನುಕಾದಳುಸೀತೆಕಾತುರದಿ”